
ಪ್ರಜಾವಾಣಿ ವಾರ್ತೆ
ರಾಮನಗರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಗೌಡ ಬುಧವಾರ ನಾಮಪತ್ರ ಸಲ್ಲಿಸಿದರು.
ಜೂನಿಯರ್ ಕಾಲೇಜು ಮೈದಾನದಿಂದ ತಾಲ್ಲೂಕು ಆಡಳಿತ ಸೌಧದವರೆಗೆ ಸಾವಿರಾರು ಕಾರ್ಯಕರ್ತರೊಂದಿಗೆ ಅವರು ಮೆರವಣಿಗೆ ನಡೆಸಿದರು.
ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ ಸಾಥ್ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.