ಚಿಕ್ಕಬಳ್ಳಾಪುರ: ಚಿಂತಾಮಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಸಿ.ಸುಧಾಕರ್- ಗೆಲುವು ಸಾಧಿಸಿದ್ದಾರೆ.
ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ- ಅವರ ಮೇಲಿನ ಮುನಿಸಿನಿಂದ 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಕಳೆದ ವರ್ಷ ಮತ್ತೆ ಕಾಂಗ್ರೆಸ್ ಸೇರಿಸಿದ್ದರು.
ಸುಧಾಕರ್ ಅವರ ಕುಟುಂಬ ಚಿಂತಾಮಣಿ ಕ್ಷೇತ್ರದಲ್ಲಿ 1951 ಚುನಾವಣೆಯಿಂದ ಇಲ್ಲಿಯವರೆಗೂ ಸ್ಪರ್ಧಿಸಿದೆ.
ಅವರ ತಾತ ಆಂಜನೇಯ ರೆಡ್ಡಿ ಇಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಅವರ ತಂದೆ ಮಾಜಿ ಸಚಿವ ಚೌಡರೆಡ್ಡಿ ಐದು ಬಾರಿ ಶಾಸಕರಾಗಿದ್ದರು. ಡಾ.ಎಂ.ಸಿ.ಸುಧಾಕರ್- 2004 ಮತ್ತು 2008ರಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.