ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ 16,127 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಘುಮೂರ್ತಿ ಅವರು ಸತತ ಮೂರನೇ ಬಾರಿಗೆ ಗೆದ್ದು, ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ 67,363 ಮತ ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ವಿರುದ್ಧ ಜಯ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ 51,236 ಮತ ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಆರ್.ಅನಿಲ್ ಕುಮಾರ್ 22,732 ಹಾಗೂ ಪಕ್ಷೇತರ- ಕೆ.ಟಿ.ಕುಮಾರಸ್ವಾಮಿ 28,928 ಮತ ಪಡೆದಿದ್ದಾರೆ. ಟಿ.ರಘುಮೂರ್ತಿ ಅವರು 2013 ಹಾಗೂ 2018 ರಲ್ಲಿ ಗೆಲುವು ಸಾಧಿಸಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.