ADVERTISEMENT

ಬೀದರ್‌: ರಾಜಶೇಖರ ಪಾಟೀಲ, ಅಶೋಕ ಖೇಣಿ, ಬಂಡೆಪ್ಪ ಕಾಶೆಂಪುರ್‌ಗೆ ಸೋಲು

​ಪ್ರಜಾವಾಣಿ ವಾರ್ತೆ
Published 13 ಮೇ 2023, 8:37 IST
Last Updated 13 ಮೇ 2023, 8:37 IST
ಬಂಡೆಪ್ಪ ಕಾಶೆಂಪೂರ
ಬಂಡೆಪ್ಪ ಕಾಶೆಂಪೂರ   

ಬೀದರ್: ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದೆ. ಜೆಡಿಎಸ್‌ ಹೀನಾಯ ಸೋಲು ಅನುಭವಿಸಿದೆ.

ಜಿಲ್ಲೆಯ ಪ್ರಭಾವಿ ರಾಜಕಾರಣಿ ಹುಮನಾಬಾದ್‌ನ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಪಾಟೀಲ ಅವರನ್ನು ಅವರದ್ದೇ ಸೋದರ ಸಂಬಂಧಿ ಬಿಜೆಪಿಯ ಸಿದ್ದು ಪಾಟೀಲ ಗೆಲುವು ಸಾಧಿಸಿದ್ದಾರೆ. ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ ಅವರನ್ನು ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ಗೆಲುವು ಸಾಧಿಸಿದ್ದಾರೆ. ನಾಲ್ವರು ಪ್ರಭಾವಿಗಳು ಕಣದಲ್ಲಿದ್ದ ಕಾರಣ ಮತಗಳು ವಿಭಜನೆಯಾಗಿ ಬಿಜೆಪಿ ಗೆಲುವು ಸಾಧ್ಯವಾಗಿದೆ.

ಔರಾದ್‌ ಮೀಸಲು ಕ್ಷೇತ್ರದಿಂದ ಬಿಜೆಪಿ ಪ್ರಭು ಚವಾಣ್‌ ನಾಲ್ಕನೇ ಬಾರಿಗೆ ಚುನಾಯಿತರಾಗಿದ್ದಾರೆ. ಭಾಲ್ಕಿಯಲ್ಲಿ ಕಾಂಗ್ರೆಸ್‌ನ ಈಶ್ವರ ಖಂಡ್ರೆ ಹಾಗೂ ಬೀದರ್‌ ಕ್ಷೇತ್ರದಲ್ಲಿ ರಹೀಂ ಖಾನ್‌ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.