ADVERTISEMENT

ವಿಧಾನಸಭೆ ಚುನಾವಣೆ | ಚಾಮರಾಜನಗರದಲ್ಲಿ ಸ್ಪರ್ಧೆ; ಸೋಮಣ್ಣ ವಿರುದ್ಧ ಬಂಡಾಯ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2023, 7:37 IST
Last Updated 13 ಏಪ್ರಿಲ್ 2023, 7:37 IST
 ವಿ.ಸೋಮಣ್ಣ
ವಿ.ಸೋಮಣ್ಣ   

ಚಾಮರಾಜನಗರ: ಜಿಲ್ಲೆಯ ನಾಲ್ಕೂ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸುತ್ತಿದ್ದಂತೆಯೇ ಆಕಾಂಕ್ಷಿಗಳಲ್ಲಿ ಅಸಮಾಧಾನದ ಹೊಗೆ ಎದ್ದಿದೆ.

ಚಾಮರಾಜನಗರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಕೆಐಆರ್‌ ಡಿಎಲ್‌ ಎಂ.ರುದ್ರೇಶ್‌ ಚಾಮರಾಜನಗರ ಮತ್ತು ವರುಣ ಕ್ಷೇತ್ರಗಳಿಂದ ಟಿಕೆಟ್‌ ಪಡೆದಿರುವ ಸಚಿವ ವಿ.ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ವರುಣದಲ್ಲಿ ಮಾತ್ರ ಸ್ಪರ್ಧಿಸಿ ತಾಕತ್ತು ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ. ‘ಟಿಕೆಟ್‌ ಕೈತಪ್ಪಿರುವುದರಿಂದ ಬೆಂಬಲಿಗರಿಗೆ ಅಸಮಾಧಾನವಾಗಿದ್ದು, ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ADVERTISEMENT

ಮತ್ತೊಬ್ಬ ಆಕಾಂಕ್ಷಿ ಜಿ.ನಾಗಶ್ರೀ ಬೆಂಬಲಿಗರು ಗುರುವಾರ ಸಭೆ ಕರೆದಿದ್ದು, ಅಲ್ಲಿ ಟಿಕೆಟ್‌ ಕೈತಪ್ಪಿರುವ ಬಗ್ಗೆ ಚರ್ಚಿಸಲಿದ್ದಾರೆ.

ಹನೂರು ಕ್ಷೇತ್ರದಲ್ಲಿ ಬಿ.ವೆಂಕಟೇಶ್‌ ಮತ್ತು ನಿಶಾಂತ್‌ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ಗುಂಡ್ಲುಪೇಟೆಯಲ್ಲಿ ನಿರಂಜನ್‌ಕುಮಾರ್‌ ವಿರುದ್ಧ ಬಂಡಾಯವೆದ್ದಿರುವ ಎಂ.ಪಿ.ಸುನಿಲ್‌ ಪಕ್ಷೇತರರಾಗಿ ಸ್ಪರ್ಧಿಸುವುದು ಖಚಿತ ಎಂದು ಬೆಂಬಲಿಗರು ತಿಳಿಸಿದ್ದಾರೆ. ಕೊಳ್ಳೇಗಾಲದಲ್ಲಿ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಿನಕನಹಳ್ಳಿ ರಾಚಯ್ಯ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.