ADVERTISEMENT

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ಭವಿಷ್ಯ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಅಧಿಕಾರ

​ಪ್ರಜಾವಾಣಿ ವಾರ್ತೆ
Published 11 ಮೇ 2023, 2:13 IST
Last Updated 11 ಮೇ 2023, 2:13 IST

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಬುಧವಾರ ಮುಕ್ತಾಯವಾಗಿದೆ. ಮತದಾನದ ಅವಧಿ ಮುಗಿಯುತ್ತಿದ್ದಂತೆಯೇ ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ವಿವರವನ್ನೂ ಬಹಿರಂಗಗೊಳಿಸಿವೆ. ಬಹುತೇಕ ಸಂಸ್ಥೆಗಳು ಕಾಂಗ್ರೆಸ್‌ ಪಕ್ಷ ನಿರ್ದಿಷ್ಟ ಬಹುಮತ ಪಡೆದು, ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ. ಇನ್ನು, ಕೆಲವು ಸಂಸ್ಥೆಗಳು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದೂ ಭವಿಷ್ಯ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.