ಹೊಸಪೇಟೆ (ವಿಜಯನಗರ): ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಕರುಣಾಕರ ರೆಡ್ಡಿ ಅವರಿಗೆ ಬಿಜೆಪಿ ನೀಡಿದೆ.
ಬುಧವಾರ ರಾತ್ರಿ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಂಡಿದ್ದು, ರೆಡ್ಡಿ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ನೀಡಿದೆ. ಮೊದಲ ಪಟ್ಟಿಯಲ್ಲಿ ರೆಡ್ಡಿ ಅವರ ಹೆಸರಿರಲಿಲ್ಲ. ರೆಡ್ಡಿ ಹಾಗೂ ಅವರ ಬೆಂಬಲಿಗರು ಚಿಂತೆಗೀಡಾಗಿದ್ದರು.
ಇದರೊಂದಿಗೆ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಘೋಷಿಸಿದಂತಾಗಿದೆ. ಆದರೆ, ಹಗರಿಬೊಮ್ಮನಹಳ್ಳಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರಕ್ಕೆ ಇನ್ನೂ ಯಾರ ಹೆಸರು ಅಂತಿಮಗೊಳಿಸಿಲ್ಲ. ನೇಮರಾಜ ನಾಯ್ಕ, ಲಕ್ಷ್ಮಿನಾರಾಯಣ ಹಾಗೂ ಬಲ್ಲಾಹುಣ್ಸಿ ರಾಮಣ್ಣ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.