ADVERTISEMENT

Karnataka Election Results 2023: ಈಗಿನ ಟ್ರೆಂಡ್; ಸರಳ ಬಹುಮತದತ್ತ ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2023, 5:24 IST
Last Updated 13 ಮೇ 2023, 5:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಬಹುಮತದತ್ತ ಮುನ್ನಡೆದಿದೆ.

ಬೆಳಿಗ್ಗೆ 10.50ರ ಟ್ರೆಂಡ್ ವೇಳೆಗೆ ಕಾಂಗ್ರೆಸ್ 116 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.

ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆಯಲು 113 ಸ್ಥಾನಗಳನ್ನು ಗಳಿಸಬೇಕಿದೆ.

ADVERTISEMENT

ಬಿಜೆಪಿ 72, ಜೆಡಿಎಸ್ 30 ಮತ್ತು ಇತರರು 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುನ್ನಡೆ ಗಳಿಸಿದ್ದಾರೆ.

ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಸಿಹಿ ಹಂಚಿ ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.