ಮೈಸೂರು: ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ ಸಿಂಹ ಸಾಥ್ ನೀಡಿದರು.
ಇದಕ್ಕೂ ಮುನ್ನ ಮೆರವಣಿಗೆ, ಶಕ್ತಿ ಪ್ರದರ್ಶನ ನಡೆಯಿತು.
ಬಹಿರಂಗ ಸಭೆಯಲ್ಲಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ. ಆ ಪಕ್ಷ ಆಡಳಿತದಲ್ಲಿದ್ದಾಗ ಶೇ 100ರಷ್ಟು ಕಮಿಷನ್ ವ್ಯವಹಾರ ನಡೆಯುತ್ತಿತ್ತು. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು. ಈಗ ಕಾಂಗ್ರೆಸ್‌ನವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.