ಗಂಗಾವತಿ: ತಾಲ್ಲೂಕಿನ ಮರಳಿ ಗ್ರಾಮದ ರಾಯಲ್ ರಿಚ್ ಕೌಂಟಿ ಹೋಟೆಲ್ ನಲ್ಲಿ ಭಾನುವಾರ ಬಿಜೆಪಿ ಮಾಧ್ಯಮ ಪ್ರಕೋಷ್ಠದಿಂದ ಆಯೋಜನೆಯಾಗಿದ್ದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ನಿಗದಿತ ಸಮಯ ಮುಗಿದಿದ್ದರಿಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಷಣ ಮೊಟಕುಗೊಂಡಿತು.
ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಬಿಜೆಪಿ ಸಾಮಾಜಿಕ ತಾಣಗಳ ಸುಮಾರು 700ಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಉದ್ಘಾಟನಾ ಸಮಾರಂಭ ಮುಗಿದ ಬಳಿಕ ಎರಡನೇ ಅವಧಿಯಲ್ಲಿ ಸಂತೋಷ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಘಟನೆ ನಡೆಯಿತು.
ಕಾರ್ಯಕ್ರಮ ನಡೆಸಲು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2ರ ತನಕ ಮಾತ್ರ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯಲಾಗಿತ್ತು. ನಿಗದಿತ ಅವಧಿಗಿಂತ ಐದು ನಿಮಿಷ ಹೆಚ್ಚಾಗಿದ್ದರಿಂದ ಅಧಿಕಾರಿಗಳು ಕಾರ್ಯಕ್ರಮ ಮುಗಿಸುವಂತೆ ಹೇಳಿದರು. ಆಗ ಮೊಟಕುಗೊಳಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.