ADVERTISEMENT

ಮೋದಿ, ಬಿಜೆಪಿ ಎಂದರೆ ಅಭಿವೃದ್ಧಿ: ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರದಲ್ಲಿ ಬಿಜೆಪಿ ಪ್ರಚಾರ ಸಭೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2023, 16:15 IST
Last Updated 30 ಏಪ್ರಿಲ್ 2023, 16:15 IST
ಕುಂದಾಪುರ ಪುರಸಭೆಯ‌ ಸಂಗಮ್ ಪರಿಸರದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು
ಕುಂದಾಪುರ ಪುರಸಭೆಯ‌ ಸಂಗಮ್ ಪರಿಸರದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು   

ಕುಂದಾಪುರ: ‘ಮೋದಿ ಹಾಗೂ ಬಿಜೆಪಿ ಎಂದರೆ ಅಭಿವೃದ್ಧಿ ಎಂಬುದು ಜನರಿಗೆ ಅರಿವಾಗಿದೆ. ಕಾಂಗ್ರೆಸ್ ಅಲೆ ಕೊಚ್ಚಿ ಹೋಗಿದ್ದು, ವಾರೆಂಟಿಯಿಲ್ಲದ ಗ್ಯಾರೆಂಟಿ ಕಾರ್ಡ್ ಮಾತ್ರ ಅವರ ಬದುಕಾಗಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರ ಪರ ಪ್ರಚಾರ ಸಂಬಂಧ ಸಂಗಮ್ ಸಮೀಪ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಪಕ್ಷದ ಪೊಳ್ಳು ಭಾಷಣಕ್ಕೆ ಯಾರು ಮರಳಾಗುವುದಿಲ್ಲ. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ, ಶಾದಿ ಭಾಗ್ಯದ ಮೂಲಕ ಸಮಾಜ ಒಡೆಯುವುದು, ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಒಂದು ಸಮುದಾಯದ ಓಲೈಕೆ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯದ ಮುಖಂಡರು ಪ್ರವಾಸ ಮಾಡುತ್ತಿದ್ದು, ಬಿಜೆಪಿ ಪರವಾದ ವಾತಾವರಣ ಕಂಡುಬರುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ಮೂಲಕ ಮೋದಿಯವರ ಕೈ ಬಲಪಡಿಸುವ ಕಾರ್ಯವಾಗಬೇಕಿದೆ. ಅಭಿವೃದ್ಧಿ ಸರ್ಕಾರದ ಅಗತ್ಯತೆ ಬಗ್ಗೆ ಜನರಿಗೆ ಒಲವಿದೆ. ಕುಂದಾಪುರ ಕ್ಷೇತ್ರದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ಅತ್ಯಧಿಕ ಬಹುಮತದಿಂದ ಗೆದ್ದು ಬರಲಿದ್ದಾರೆ ಎನ್ನುವ ವಿಶ್ವಾಸ ಕಾರ್ಯಕರ್ತರ ಉತ್ಸಾಹದಿಂದ ಕಂಡುಬರುತ್ತದೆ’ ಎಂದರು.

ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಪಕ್ಷದ ಪ್ರಮುಖರಾದ ಶ್ಯಾಮಲಾ ಕುಂದರ್, ಮೋಹನದಾಸ್ ಶೆಣೈ, ಕಾಡೂರು ಸುರೇಶ್ ಶೆಟ್ಟಿ, ಭಾಸ್ಕರ್ ಪುತ್ರನ್ ಇದ್ದರು.

ಮೋದಿಯನ್ನು ದೂಷಿಸಿ ಅವಮಾನಿಸುವುದು ಕಾಂಗ್ರೆಸ್ ಪಕ್ಷದ ಅಜೆಂಡವಾಗಿದ್ದು ನಮ್ಮದು ಅಭಿವೃದ್ಧಿಗಾಗಿ ಡಬಲ್ ಎಂಜಿನ್ ಸರ್ಕಾರ ತರುವ ಧ್ಯೇಯವಾಗಿದೆ
ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.