ADVERTISEMENT

ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ 

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2023, 14:02 IST
Last Updated 14 ಏಪ್ರಿಲ್ 2023, 14:02 IST
   

ಬೆಂಗಳೂರು: ಅಥಣಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸವದಿ ಅವರು ಕಾಂಗ್ರೆಸ್‌ಗೆ ಸೇರಿದರು.

‘ಮಾಜಿ ಉಪ ಮುಖ್ಯಮಂತ್ರಿ, ಲಿಂಗಾಯತ ನಾಯಕರಲ್ಲಿ ಒಬ್ಬರಾದ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಅತ್ಮೀಯವಾಗಿ ಬರಮಾಡಿಕೊಂಡಿದ್ದೇವೆ. ಸವದಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳನ್ನು ಕೆಳೆದುಕೊಳ್ಳಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಶೇ 40 ಪರ್ಸೆಂಟ್‌ ಸರ್ಕಾರ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ರಣದೀಪ್‌ ಸಿಂಗ್‌ ಸುರ್ಜೆವಾಲಾ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.