ADVERTISEMENT

ಬೆಳಗಾವಿ ಲೋಕಸಭಾ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 7:15 IST
Last Updated 15 ಏಪ್ರಿಲ್ 2024, 7:15 IST
   

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳಕರ ಸೋಮವಾರ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಾಗಣ್ಣ ನರೋಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT