ADVERTISEMENT

ಲೋಕಸಭಾ ಚುನಾವಣೆ | 14 ಕ್ಷೇತ್ರ: ಕಣ ಚಿತ್ರಣ ಇಂದು ಸ್ಪಷ್ಟ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 23:34 IST
Last Updated 21 ಏಪ್ರಿಲ್ 2024, 23:34 IST
ಲೋಕಸಭಾ ಚುನಾವಣೆ 
ಲೋಕಸಭಾ ಚುನಾವಣೆ    

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಹಿಂ‍‍ಪಡೆಯಲು ಸೋಮವಾರ ಕೊನೆಯ ದಿನ. ಈ ಅವಧಿ ಮುಗಿದ ಬಳಿಕ 14 ಕ್ಷೇತ್ರಗಳ ಚುನಾವಣಾ ಕಣದ ಸ್ಪಷ್ಟ ಚಿತ್ರಣ ದೊರಕಲಿದೆ.

ಈ ಕ್ಷೇತ್ರಗಳಲ್ಲಿ ಏಪ್ರಿಲ್‌ 12 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಏ.19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಒಟ್ಟು 337 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವರಲ್ಲಿ 309 ಮಂದಿ ಪುರುಷರಿದ್ದರೆ, 28 ಮಹಿಳೆಯರು.

ಶಿವಮೊಗ್ಗ, ದಾವಣಗೆರೆ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಡಾ. ಪ್ರಭಾ ಮಲ್ಲಿಕಾರ್ಜುನ ವಿರುದ್ಧ ಇನ್‌ಸೈಟ್ಸ್‌ ಐಎಎಸ್‌ ಅಕಾಡೆಮಿಯ ಜಿ.ಬಿ. ವಿನಯ್‌ ಕುಮಾರ್‌ ಬಂಡಾಯ ಸಾರಿದ್ದಾರೆ.

ADVERTISEMENT

ಶಿವಮೊಗ್ಗ ಮತ್ತು ಧಾರವಾಡದಲ್ಲಿ ಬಂಡಾಯ ಅಭ್ಯರ್ಥಿಗಳನ್ನು ಹಿಂದಕ್ಕೆ ಸರಿಸುವ ಪ್ರಯತ್ನದಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ. ದಾವಣಗೆರೆಯಲ್ಲಿ ವಿನಯ್‌ ಕುಮಾರ್‌ ಅವರನ್ನು ಮನವೊಲಿಸಲು ಕಾಂಗ್ರೆಸ್‌ ನಾಯಕರು ಪ್ರಯತ್ನಿಸುತ್ತಿದ್ದಾರೆ. ಬಂಡಾಯ ಅಭ್ಯರ್ಥಿಗಳ ಸ್ಪರ್ಧೆ ಕುರಿತ ಕುತೂಹಲಕ್ಕೆ ಸೋಮವಾರ ತೆರೆ ಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.