ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದರು. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ಇಲ್ಲಿನ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.