ಬೆಂಗಳೂರು: ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಎಂದು ಆರೋಪಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಾಂಗ್ರೆಸ್ ಪೋಸ್ಟ್ ಹಂಚಿಕೊಂಡು,‘ ಜೆಡಿಎಸ್ ಪಕ್ಷದ ಕೇಂದ್ರ ಹೆಡ್ ಆಫೀಸ್‌ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸದುಡುಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಕರ್ನಾಟಕ ಚುನಾವಣಾ ಆಯೋಗವು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಪ್ರಶ್ನಿಸಿದೆ.
‘ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ?, ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.