ಬೆಂಗಳೂರಿನ 'ಪ್ರಜಾವಾಣಿ’ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ‘ಫೋನ್–ಇನ್’ ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮಾತನಾಡಿದರು
-ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಪುತ್ರ ಅಲೋಕ್ ವಿಶ್ವನಾಥ್‌ಗೆ ನೀಡದಿದ್ದರೆ ನಾನೇ ಅಭ್ಯರ್ಥಿ ಆಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ’ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿದ್ಯಾವಂತರಾಗಿರುವ ನನ್ನ ಪುತ್ರ ಅಲೋಕ್ ವಿಶ್ವನಾಥ್ ಬಗ್ಗೆ ಕ್ಷೇತ್ರದ ಮತದಾರರಲ್ಲಿ ಒಲವಿದೆ ಎಂಬುದನ್ನು ಸಮೀಕ್ಷೆಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ’ ಎಂದರು.
‘ನಾನು ಪಕ್ಷ ನಿಷ್ಠನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ. ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ’ ಎಂದರು.
‘ಬಿಜೆಪಿಯ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರ ಕೈತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ’ ಎಂದೂ ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.