ಚಾಮರಾಜನಗರ: ನಗರದಲ್ಲಿ ಬುಧವಾರ ರಾತ್ರಿ ನಮೋ ಬ್ರಿಗೇಡ್ ಹಮ್ಮಿಕೊಂಡಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬೇಕಾಯಿತು.
ನಗರದ ರಥಬೀದಿಯ ಗುರುನಂಜಪ್ಪನವರ ಛತ್ರದ ಮುಂಭಾಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅವಕಾಶ ನೀಡಲಾಗಿತ್ತು.
ಆದರೆ, ಕಾರ್ಯಕ್ರಮ ವಿಳಂಬವಾಗಿದ್ದರಿಂದ, ಎಂಟು ಗಂಟೆಯ ನಂತರ ವೇಳೆಗೆ ವೇದಿಕೆ ಏರಿದ ಚುನಾವಣಾ ಅಧಿಕಾರಿಗಳು ಮಾತು ನಿಲ್ಲಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.
ಮಂಗಳವಾರ ಹುಣ್ಣಿಮೆಯ ಅಂಗವಾಗಿ ಶ್ರೀಚಾಮರಾಜೇಶ್ವರಸ್ವಾಮಿ ಹುಣ್ಣಿಮೆ ರಥೋತ್ಸವ ನಡೆಯುತ್ತಿದ್ದುದರಿಂದ ಕಾರ್ಯಕ್ರಮ ಆರಂಭವಾಗುವಾಗ ತಡವಾಯಿತು ಎಂದು ಸಂಘಟಕರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.