ADVERTISEMENT

ಲೋಕಸಭೆ ಚುನಾವಣೆ: ಮಂಡ್ಯದಲ್ಲಿ ಕುಮಾರಸ್ವಾಮಿ ಸ್ಪರ್ಧೆ

ಏಜೆನ್ಸೀಸ್
Published 26 ಮಾರ್ಚ್ 2024, 14:56 IST
Last Updated 26 ಮಾರ್ಚ್ 2024, 14:56 IST
<div class="paragraphs"><p>ಜೆಡಿಎಸ್‌</p></div>

ಜೆಡಿಎಸ್‌

   

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. 

ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಎಸ್‌ ಹಾಸನ, ಕೋಲಾರ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ADVERTISEMENT

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ. ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಮತ್ತೊಮ್ಮೆ ಸ್ಪರ್ಧಿಸಲಿದ್ದು, ಕೋಲಾರ ಕ್ಷೇತ್ರದಲ್ಲಿ ಹೊಸ ಮುಖ ಆರ್‌.ಸಿ. ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.