ADVERTISEMENT

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಏಪ್ರಿಲ್ 2024, 6:53 IST
Last Updated 26 ಏಪ್ರಿಲ್ 2024, 6:53 IST
<div class="paragraphs"><p>ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ</p></div>

ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ

   

(ಚಿತ್ರ ಕೃಪೆ: X/@siddaramaiah)

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ADVERTISEMENT

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ.

ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

'ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು ಕಿತ್ತೆಸೆದು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪನೆ ಮಾಡಲು ನನ್ನ ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಪ್ರಜ್ಞಾವಂತಿಕೆಯಿಂದ ನನ್ನ ಹಕ್ಕಿನ ಮತ ಚಲಾಯಿಸಿದೆ' ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.