ಬೆಂಗಳೂರು: ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ನೀಡದಿದ್ದರೆ, ಪಂಚಮಸಾಲಿ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಬುಧವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಮುಖಂಡರನ್ನು ಭೇಟಿಯಾಗಿ ವೀಣಾ ಕಾಶಪ್ಪನವರಿಗೆ ಏಕೆ ಟಿಕೆಟ್ ನೀಡಬೇಕು ಎಂಬುದನ್ನು ಮನವರಿಕೆ ಮಾಡುವ ಪ್ರಯತ್ನ ನಡೆಸಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸ್ವಾಮೀಜಿ, ‘ಬಾಗಲಕೋಟೆ ಕ್ಷೇತ್ರದಿಂದ ಸಂಯುಕ್ತ ಪಾಟೀಲ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕು. ಒಂದು ವೇಳೆ ಇದೇ ಅಂತಿಮ ನಿರ್ಧಾರ ಎಂದರೆ, ನಾವು ಕೂಡ ಚುನಾವಣೆಯಲ್ಲಿ ಒಮ್ಮತದ ನಿರ್ಣಯ ಮಾಡಬೇಕಾಗುತ್ತದೆ’ ಎಂದು ಸ್ವಾಮೀಜಿ ಹೇಳಿದರು.
ಸಂಯುಕ್ತ ಪಾಟೀಲ ಅವರಿಗೆ ಬಾಗಲಕೋಟೆ ಕ್ಷೇತ್ರ ಬಿಟ್ಟು ಬೇರೆ ಕಡೆ ಕೊಡಲಿ. ಆದರೆ, ಸ್ಥಳೀಯರೇ ಆದ ವೀಣಾ ಕಾಶಪ್ಪನವರಿಗೆ ಟಿಕೆಟ್ ನಿರಾಕರಿಸಿದ್ದರ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.