ADVERTISEMENT

LS Polls | ಅಮಿತ್‌ ಶಾ ಅಪರಾಧಿ: ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 2 ಮೇ 2024, 15:30 IST
Last Updated 2 ಮೇ 2024, 15:30 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ರಾಯಚೂರು: ‘ಪ್ರಜ್ವಲ್‌ ರೇವಣ್ಣ ಮಹಿಳೆಯವರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಜೆಪಿ ಮುಖಂಡರೊಬ್ಬರು ಪತ್ರ ಬರೆದು ಎಚ್ಚರಿಸಿದ್ದರೂ ಕ್ರಮ ಕೈಗೊಳ್ಳದೆ ಸುಮ್ಮನಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ಅಪರಾಧ ಎಸಗಿದ್ದಾರೆ. ಹೀಗಾಗಿ ಅವರ ಮೇಲೂ ಕ್ರಮ ಕೈಗೊಳ್ಳಬೇಕು’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒತ್ತಾಯಿಸಿದರು.

ಗುರುವಾರ ಇಲ್ಲಿ ಪ್ರಜಾ ಧ್ವನಿ–2 ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ‘ಗೃಹ ಸಚಿವರಿಗೆ ಮಾಹಿತಿ ಇತ್ತು ಎಂದ ಮೇಲೆ ಪ್ರಧಾನಿ ನರೇಂದ್ರ ಮೋದಿಗೂ ಈ ವಿಷಯ ಗೊತ್ತಿರಲೇಬೇಕು. ಅಧಿಕಾರ ದಾಹದಿಂದಾಗಿ ಪ್ರಧಾನಿ ಹಾಗೂ ಗೃಹ ಸಚಿವರು ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಚರ್ಚೆಯಾಗುತ್ತಿದ್ದಂತೆ ಮೋದಿ ಅವರು ಕರ್ನಾಟಕದ ತಮ್ಮ ಎಲ್ಲಾ ಪ್ರಚಾರ ಸಭೆಗಳನ್ನು ರದ್ದುಗೊಳಿಸಿದ್ದಾರೆ. ಮೋದಿ ಅವರೇ ಕರ್ನಾಟಕದಿಂದ ಓಡಿಹೋಗಬೇಡಿ. ರಾಜ್ಯಕ್ಕೆ ಬಂದು ಪ್ರಜ್ವಲ್‌ನನ್ನು ಏಕೆ ರಕ್ಷಿಸಿದ್ದೀರಿ? ಈ ವ್ಯಕ್ತಿಗಾಗಿ ಏಕೆ ಮತಯಾಚಿಸಿದ್ದೀರಿ ಎಂಬ ಬಗ್ಗೆ ಸಂತ್ರಸ್ತ ಮಹಿಳೆಯರಿಗೆ ಉತ್ತರ ನೀಡಿ’ ಎಂದು ಪ್ರಧಾನಿಗೆ ಸವಾಲು ಹಾಕಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.