
ಪ್ರಜಾವಾಣಿ ವಾರ್ತೆ
ಹುಣಸೂರು: ‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾರ್ಚ್ 20ರಂದು ಗದ್ದಿಗೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಂತೆಕೆರೆ ಕೋಡಿ, ರತ್ನಾಪುರಿ, ಹುಣಸೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ’ ಎಂದು ಬಿಜೆಪಿ ಮುಖಂಡ ನಾಗಣ್ಣೇಗೌಡ ತಿಳಿಸಿದರು.
‘ಹುಣಸೂರು ನಗರದ ಎಚ್.ಡಿ.ಕೋಟೆ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.