ಸಾಂದರ್ಭಿಕ ಚಿತ್ರ
ಬೆಂಗಳೂರು: ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ ಸಂಸದರಾದ ಡಿ.ವಿ.ಸದಾನಂದಗೌಡ, ಕರಡಿ ಸಂಗಣ್ಣ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ.
ಪಕ್ಷದ ವರಿಷ್ಠರ ಬಗ್ಗೆ ಮುನಿಸಿಕೊಂಡಿರುವ ಸದಾನಂದಗೌಡ ಅವರು ಮಂಗಳವಾರ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿ, ಪಕ್ಷದಲ್ಲಿ ಒಕ್ಕಲಿಗರಿಗೆ ಅನ್ಯಾಯವಾದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ತಮ್ಮ ಮುಂದಿನ ರಾಜಕೀಯ ನಡೆಯನ್ನು ಬುಧವಾರ ಸುದ್ದಿಗೋಷ್ಠಿ ನಡೆಸಿ ಬಹಿರಂಗ ಪಡಿಸುವುದಾಗಿಯೂ ತಿಳಿಸಿದರು.
ಜೆ.ಸಿ.ಮಾಧುಸ್ವಾಮಿ ಅವರಿಗೆ ಕಾಂಗ್ರೆಸ್ ಬಲೆ ಬೀಸಿದ್ದು, ಲೋಕಸಭೆ ಟಿಕೆಟ್ ಅಥವಾ ವಿಧಾನಪರಿಷತ್ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಿದೆ. ಒಂದೆರಡು ದಿನಗಳಲ್ಲಿ ಅವರು ತಮ್ಮ ನಿರ್ಣಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ‘ಅಂತಹ ಪ್ರಯತ್ನಗಳು ನಡೆದಿಲ್ಲ, ಮುಂದೆ ನೋಡೋಣ’ ಎಂದಷ್ಟೇ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಕರಡಿ ಸಂಗಣ್ಣ ಅವರನ್ನೂ ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದು, ‘ಲೋಕಸಭೆಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡುವುದಾಗಿ ಆಶ್ವಾಸನೆ ಕೊಟ್ಟಿದೆ. ಗುರುವಾರ ತಮ್ಮ ಬೆಂಬಲಿಗರ ಸಭೆಯಲ್ಲಿ ಚರ್ಚಿಸಿ, ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಸಂಗಣ್ಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.