ADVERTISEMENT

ಕೇಂದ್ರದ ಸಾಲಕ್ಕೂ, ನಿಮ್ಮ ಸಾಲಕ್ಕೂ ವ್ಯತ್ಯಾಸವಿದೆ: ಸಿದ್ದರಾಮಯ್ಯ ವಿರುದ್ಧ ಅಶೋಕ್

ಪ್ರಜಾವಾಣಿ ವಿಶೇಷ
Published 5 ಏಪ್ರಿಲ್ 2024, 12:39 IST
Last Updated 5 ಏಪ್ರಿಲ್ 2024, 12:39 IST

ಸಿದ್ದರಾಮಯ್ಯ ಅವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ ಎಂದು ವಿಪಕ್ಕ ನಾಯಕ ಆರ್.ಅಶೋಕ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್‌ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ 11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ 3.4ರಷ್ಟು ಆಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.