ADVERTISEMENT

ರಾಜಕಾರಣಿಯಾಗಿ ನಾನು ಫೇಲ್, ಸಂಸದನಾಗಿ ಸಕ್ಸಸ್: ಪ್ರತಾಪ ಸಿಂಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮಾರ್ಚ್ 2024, 5:45 IST
Last Updated 26 ಮಾರ್ಚ್ 2024, 5:45 IST
<div class="paragraphs"><p>ಪ್ರತಾಪ ಸಿಂಹ</p></div>

ಪ್ರತಾಪ ಸಿಂಹ

   ಪ್ರಜಾವಾಣಿ ಚಿತ್ರ

ಬೆಂಗಳೂರು: ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಒಬ್ಬ ಸಂಸದನಾಗಿ ಸಕ್ಸಸ್ ಆಗಿದ್ದೇನೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. 

ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ‘ರಾಜಕಾರಣಿಯಾದವರು ಕೇವಲ ಚುನಾವಣಾ ಟಿಕೆಟ್‌ಗೋಸ್ಕರ ಹೋರಾಟ ಮಾಡಬಾರದು. ಒಳ್ಳೆಯ ಕೆಲಸ ಮಾಡುವುದಕ್ಕಾಗಿ ಹೋರಾಡಬೇಕು. ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಒಬ್ಬ ಸಂಸದನಾಗಿ ಸಕ್ಸಸ್ ಆಗಿದ್ದೇನೆ. ರಾಜಕಾರಣಕ್ಕೂ ಅಭಿವೃದ್ಧಿ ಬಹಳ ವ್ಯತ್ಯಾಸವಿದೆ ಎಂದಿದ್ದಾರೆ.

ADVERTISEMENT

ನಾನು ಇದುವರೆಗೆ ರಾಜಕಾರಣ ಕಲಿತಿರಲಿಲ್ಲ. ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ. ನಾನು ಕೇವಲ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಅದೇ ರೀತಿ ನಾಗಾಲೋಟದಿಂದ ಓಡಾಡಿ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಇದೇ ಕಾರಣಕ್ಕೆ ಜನರು ಎರಡು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಇವುಗಳ ಮಧ್ಯೆ ರಾಜಕಾರಣ ಇರುತ್ತದೆ ಎಂಬುದು ಅರಿತುಕೊಳ್ಳುವಲ್ಲಿ ನಾನು ಸೋತಿದ್ದೇನೆ’ ಎಂದು ಹೇಳಿದ್ದಾರೆ. 

ಪ್ರತಾಪ ಸಿಂಹ ಅವರಿಗೆ ಈ ಬಾರಿಯ ಲೋಕಸಭೆ ಚುನಾವಣೆಯ ಟಿಕೆಟ್‌ ಕೈತಪ್ಪಿರುವ ಹಿನ್ನೆಲೆಯಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.