ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆಯಿ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ.
ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ ಉಪ ಖಜಾನೆಯಲ್ಲಿ ಇರಿಸಲಾಗಿದೆ ಎಂದು ಖಾನಾಪುರ ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.