ADVERTISEMENT

Election Express: ನೋಟಿಸ್‌ಗೆ ಸ್ಪಂದಿಸದಿದ್ದರೆ ಬಂಧನವಾಗುತ್ತೆ: ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 2 ಮೇ 2024, 14:13 IST
Last Updated 2 ಮೇ 2024, 14:13 IST

ಪ್ರಜಾಮತ ಎಲೆಕ್ಷನ್ ಎಕ್ಸ್‌ಪ್ರೆಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಕೊಟ್ಟಿದ್ದರಿಂದಾಗಿ ರಾತ್ರೋರಾತ್ರಿ ಬಿಟ್ಟು ಹೋಗಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಕಲಬುರಗಿಯಲ್ಲಿ ಮಾತನಾಡಿ, ಪ್ರಜ್ವಲ್ ಅವರು ಹೊರ ದೇಶಕ್ಕೆ ಹೋದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ದೂರು ಕೊಡುವುದು ಗಮನಕ್ಕೆ ಬರುತ್ತಿದ್ದಂತೆ ದೇಶ ಬಿಟ್ಟು ಹೋಗಿದ್ದಾರೆ. ವಿದೇಶಕ್ಕೆ ಹೋಗಿರುವ ಟಿಕೆಟ್‌ಗಳು ನಮಗೆ ಲಭ್ಯವಾಗಿವೆ. ಕೇಂದ್ರ ಸರ್ಕಾರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ಕೊಟ್ಟಿದ್ದರಿಂದಾಗಿ ಅವರು ರಾತ್ರೋರಾತ್ರಿ ದೇಶ ಬಿಟ್ಟು ಹೋಗಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಎಚ್.ಡಿ.ರೇವಣ್ಣಗೆ ನೋಟಿಸ್ ನೀಡಿದ್ದು ಒಂದು ವೇಳೆ ಇದಕ್ಕೆ ಸ್ಪಂದಿಸದೇ ಇದ್ದಲ್ಲಿ ಕಾನೂನಿನ ಅಡಿಯಲ್ಲಿ ಬಂಧಿಸಬೇಕಾಗುತ್ತೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.