ADVERTISEMENT

ಕಾಂಗ್ರೆಸ್‌– ಜೆಡಿಎಸ್‌ ಒಳ ಒಪ್ಪಂದ: ರಾಜೀವ್‌ ಚಂದ್ರಶೇಖರ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2023, 18:55 IST
Last Updated 30 ಏಪ್ರಿಲ್ 2023, 18:55 IST
ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್‌ ಚಂದ್ರಶೇಖರ್‌ ಮಾತನಾಡಿದರು. -ಪಿಟಿಐ ಚಿತ್ರ
ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್‌ ಚಂದ್ರಶೇಖರ್‌ ಮಾತನಾಡಿದರು. -ಪಿಟಿಐ ಚಿತ್ರ   

ಬೆಂಗಳೂರು: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಜೆಡಿಎಸ್‌ ಅಭ್ಯರ್ಥಿ ತಟಸ್ಥರಾಗಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು ಎಂಬುದು ಇದರಿಂದ ಸಾಬೀತಾಗಿದೆ ಎಂದಿದ್ದಾರೆ.

ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಬಂದೇನವಾಜ್‌ ಮಹಾಬರಿ ಅವರು ಕಾಂಗ್ರೆಸ್‌ನ ಅಬ್ದುಲ್‌ ಹಮೀದ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.