ADVERTISEMENT

ಸಿದ್ದರಾಮಯ್ಯ ಅಸಹಾಯಕತೆ ನಾವು ಪಕ್ಷ ಬಿಡಲು ಪ್ರೇರಣೆ: ಮಾಜಿ ಸಚಿವ ಎಸ್‌.ಟಿ ಸೋಮಶೇಖರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮೇ 2023, 7:51 IST
Last Updated 17 ಮೇ 2023, 7:51 IST
ಎಸ್‌.ಟಿ. ಸೋಮಶೇಖರ್‌
ಎಸ್‌.ಟಿ. ಸೋಮಶೇಖರ್‌   

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನದ ನಮ್ಮ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇಲ್ಲವೆಂದು ಅವರು ನಿರಾಕರಿಸುವರೇ? ಎಂದು ಮಾಜಿ ಸಚಿವ ಸುಧಾಕರ್ ಹೇಳಿಕೆಯನ್ನು ಮಾಜಿ ಸಚಿವ ಎಸ್‌.ಟಿ ಸೋಮಶೇಖರ್‌ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. 

ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ. ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು ಎಂದು ಸೋಮಶೇಖರ್ ಬರೆದುಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.