ADVERTISEMENT

ತುಮಕೂರು ನಗರ, ಗ್ರಾಮಾಂತರದಲ್ಲಿ ಕಾಂಗ್ರೆಸ್, ಜೆಡಿಎಸ್ ನಾಮಪತ್ರ: ಶಕ್ತಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2023, 8:17 IST
Last Updated 20 ಏಪ್ರಿಲ್ 2023, 8:17 IST
ನಾಮ ಪತ್ರ ಸಲ್ಲಿಕೆ ವೇಳೆ ಸೇರಿದ್ದ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರು
ನಾಮ ಪತ್ರ ಸಲ್ಲಿಕೆ ವೇಳೆ ಸೇರಿದ್ದ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರು    

ತುಮಕೂರು: ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ಶಕ್ತಿ ಪ್ರದರ್ಶಿಸಿದರು.

ಎರಡು ಪಕ್ಷಗಳ ಕಾರ್ಯಕರ್ತರ ಮೆರವಣಿಗೆ ನಗರದ ಟೌನ್‌ಹಾಲ್ ವೃತ್ತಕ್ಕೆ ಒಮ್ಮೆಲೆ ಬಂದು ಸೇರಿತು. ಕೆಲ ಹೊತ್ತು ಎರಡು ಪಕ್ಷಗಳ ಕಾರ್ಯಕರ್ತರು ಒಗ್ಗೂಡಿದಂತೆ ಕಂಡು ಬಂತು. ತಮ್ಮ ಅಭ್ಯರ್ಥಿ, ಪಕ್ಷದ ಪರ ಘೋಷಣೆ ಮೊಳಗಿಸಿದರು. ಎರಡು ಪಕ್ಷದ ಕಾರ್ಯಕರ್ತರು ಒಗ್ಗೂಡಿದ್ದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಕಾಂಗ್ರೆಸ್‌ನವರು ಒಂದು ಕಡೆ ತೆರಳಿದರೆ, ಜೆಡಿಎಸ್‌ನವರು ಮತ್ತೊಂದು ರಸ್ತೆಯಲ್ಲಿ ಸಾಗಿದರು.

ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅಹ್ಮದ್, ಜೆಡಿಎಸ್ ಅಭ್ಯರ್ಥಿಯಾಗಿ ಎನ್.ಗೋವಿಂದರಾಜು ನಾಮಪತ್ರ ಸಲ್ಲಿಸಿದರು. ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಡಿ.ಸಿ.ಗೌರಿಶಂಕರ ಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ನಾಮಪತ್ರ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.