ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 9:43 IST
Last Updated 18 ಏಪ್ರಿಲ್ 2024, 9:43 IST
<div class="paragraphs"><p>ಎಚ್‌.ಡಿ ಕುಮಾರಸ್ವಾಮಿ</p></div>

ಎಚ್‌.ಡಿ ಕುಮಾರಸ್ವಾಮಿ

   

(ಸಂಗ್ರಹ ಚಿತ್ರ)

ಶಿವಮೊಗ್ಗ: 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ADVERTISEMENT

ಸಂಸದ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ನಾನು ಸರ್ಕಾರ ಮಾಡಿದ್ದೆ. ಬಿ.ಎಸ್.ಯಡಿಯೂರಪ್ಪ , ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ್ದಾರೆ. ಆಗೆಲ್ಲಾ ಬರ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬಂದಿದೆ‘ ಎಂದರು.

‘ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ ಅಭಿವೃದ್ಧಿಗೆ ಸಂಸದ ಬಿ.ವೈ. ರಾಘವೇಂದ್ರ ಶ್ರಮಿಸಿದ್ದಾರೆ. 2006ರಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆ ಒಟ್ಟಾಗಿ ಕೆಲಸ ಮಾಡಿದ್ದ ವೇಳೆ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿತ್ತು. ಆ ಯೋಜನೆಯ ಫಲಾನುಭವಿಗಳು ಇವತ್ತಿನ ಯುವತಿಯರು’ ಎಂದರು.

‘ಮೈತ್ರಿ ಸರ್ಕಾರದಲ್ಲಿ ಸಾರಾಯಿ ನಿಷೇಧ ಮಾಡಲಾಗಿತ್ತು. ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ಇವತ್ತು ಅಧಿಕಾರಕ್ಕೆ ಬಂದಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಮಹಿಳೆಯರಿಗೆ ₹1ಲಕ್ಷ ಹಣ ನೀಡುವುದಾಗಿ ಹೇಳಿದೆ. 75 ಕೋಟಿ ತಾಯಂದಿರು ಈ ದೇಶದಲ್ಲಿದ್ದಾರೆ. ಅವರಿಗೆಲ್ಲ ಹಣ ನೀಡಲು ₹75 ಲಕ್ಷ ಕೋಟಿ ಬೇಕು. ಈಗಿನ ಬಜೆಟ್ ₹47 ಲಕ್ಷ‌ ಕೋಟಿ ಮಾತ್ರ. ಉಳಿದ ಹಣ ಎಲ್ಲಿಂದ ತರುತ್ತಾರೆ’ ಎಂದು ವ್ಯಂಗ್ಯವಾಡಿದರು.

‘ಗ್ಯಾರಂಟಿ ಯೋಜನೆಯಡಿ ಮಹಿಳೆಯರಿಗೆ ₹2 ಸಾವಿರ ನೀಡಲಾಗುತ್ತಿದೆ. ಆದರೆ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲಾಗಿದೆ. ಆಸ್ತಿ ನೋಂದಣಿ ದರ ಹೆಚ್ಚಿಸಿದ್ದಾರೆ. ಹೀಗಾಗಿ ಇದು ಪಿಕ್ ಪಾಕೆಟ್ ಸರ್ಕಾರವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.