ADVERTISEMENT

ದೇವೇಗೌಡರ ಸ್ಪರ್ಧೆ ಕುರಿತು ಇಂದು ನಿರ್ಧಾರ ಪ್ರಕಟ: ಎಚ್‌.ಡಿ. ರೇವಣ್ಣ 

ಲೋಕಸಭಾ ಚುನಾವಣೆ 2019 

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 6:32 IST
Last Updated 21 ಮಾರ್ಚ್ 2019, 6:32 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಇಂದು ಸಂಜೆ ನಿರ್ಧಾರವಾಗಲಿದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ತುಮಕೂರು ಅಥವಾ ಬೆಂಗಳೂರು ಉತ್ತರ ಈ ಎರಡುಕ್ಷೇತ್ರಗಳಪೈಕಿ ಒಂದರಲ್ಲಿ ಸ್ಪರ್ಧಿಸುವ ಬಗ್ಗೆ ಸಂಜೆಯೊಳಗೆ ನಿರ್ಧಾರ ಕೈಗೊಳ್ಳುವರು. ಅಲ್ಲಿಯವರೆಗೂ ಕಾಯಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಮುಖಂಡರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಳಿ ತಮ್ಮ‌ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿ ರೇವಣ್ಣ, ‘ಈ ಸಂಬಂಧ ಸಿದ್ದರಾಮಯ್ಯ ಹಾಗೂ ಸ್ಥಳೀಯ ನಾಯಕರ ಜತೆ ಕುಳಿತು ಮಾತನಾಡುತ್ತೇನೆ.‌ ಕೋಮುವಾದಿಗಳನ್ನು ದೂರವಿಡಲು ಎಲ್ಲರೂ ಪಕ್ಷಾತೀತವಾಗಿ ಕೈ ಜೋಡಿಸಬೇಕು. ಶೀಘ್ರದಲ್ಲೇ ಸ್ಥಳೀಯ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಲಾಗುವುದು’ ಎಂದರು.

ADVERTISEMENT

ಶುಕ್ರವಾರ ಮಧ್ಯಾಹ‌್ನ 12.5ರಿಂದ 1 ಗಂಟೆಯೊಳಗೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವರು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೂ ಆಹ್ವಾನ ನೀಡಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆ ಹರದನಹಳ್ಳಿ ಈಶ್ವರ ದೇವಸ್ಥಾನ, ಹೊಳೆನರಸೀಪುರ ಲಕ್ಷೀನರಸಿಂಹ ಸ್ವಾಮಿ, ಮಾವಿನಕರೆ ಬೆಟ್ಟದ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಲಾಗುವುದು. ಬಳಿಕ ನಗರದ ಎನ್. ಆರ್. ವೃತ್ತದಿಂದ ಜಿಲ್ಲಾಧಿಕಾರಿ ‌ಕಚೇರಿವರೆಗೂ ಮೆರವಣಿಗೆ ನಡೆಸಲಾಗುವುದು. ನಾಮಪತ್ರ ಸಲ್ಲಿಸಿದ ಬಳಿಕ ಬಹಿರಂಗ ಸಭೆ ನಡೆಸಲಾಗುವುದು ಎಂದರು.

ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಇದೇ 25ರಂದು ನಾಮಪತ್ರ ಸಲ್ಲಿಸುವರು. ಗುರುವಾರ ಸಲ್ಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.