ADVERTISEMENT

ಹಾಸನ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ 2019

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 9:07 IST
Last Updated 22 ಮಾರ್ಚ್ 2019, 9:07 IST
ಹಾಸನ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮ ಪತ್ರ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ
ಹಾಸನ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮ ಪತ್ರ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ   

ಹಾಸನ:ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲುಹಾಸನ ಕ್ಷೇತ್ರದಿಂದಜೆಡಿಎಸ್‌ –ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಬಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್‌ಗೆ ಸಾಥ್‌ ನೀಡಿದರು.

ಇದಕ್ಕೂ ಮುನ್ನ ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನ, ಹರದನಹಳ್ಳಿ ಈಶ್ವರ, ಮಾವಿನಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವರ ಬಳಿ ನಾಮಪತ್ರ ಇಟ್ಟು ಪೂಜೆ ಸಲ್ಲಿಸಲಾಯಿತು.

ADVERTISEMENT

ಬಳಿಕಪ್ರಜ್ವಲ್, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆಎನ್. ಆರ್. ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆನ ನಡೆಸಿದರು.

ಮೆರವಣಿಗೆಯಲ್ಲಿ ಪ್ರಜ್ವಲ್ ತಂದೆ ಸಚಿವ ಎಚ್.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ, ಶಾಸಕರಾದ ಲಿಂಗೇಶ್, ಎ‌.ಟಿ.ರಾಮಸ್ವಾಮಿ, ಸಿ.ಎನ್‌‌.ಬಾಲಕೃಷ್ಣ,ಕೆ.ಎಂ.ಶಿವಲಿಂಗೇಗೌಡ, ಎಚ್.ಕೆ.ಕುಮಾರಸ್ವಾಮಿ, ಉಪಸಭಾಪತಿ ಧರ್ಮೇಗೌಡ, ಸಚಿವ ಜಿ.ಟಿ.ದೇವೇಗೌಡ ಸೇರಿದಂತೆಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಬಿಎಂ ರಸ್ತೆಯಲ್ಲಿಟ್ರಾಫಿಕ್‌ ಜಾಮ್‌ಆಗಿತ್ತು.ಜನರನ್ನುನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.