ADVERTISEMENT

ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದ್ದು ರೈತರನ್ನು ಕಡೆಗಣಿಸಿದೆ: ಮಾಯಾವತಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 13:18 IST
Last Updated 25 ಮಾರ್ಚ್ 2019, 13:18 IST
   

ಲಖನೌ:ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಿರುವ ₹10 ಸಾವಿರ ಕೋಟಿ ಬಾಕಿಇದ್ದರೆ ಹೇಗೆ ತಾನೆ ರೈತರು ಸಂತೋಷದಿಂದ ಇರಲು ಸಾಧ್ಯ. ಸರ್ಕಾರ ಉತ್ತರ ಪ್ರದೇಶದ ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ರೈತ ವಿರೋಧಿಯಾಗಿದ್ದು, ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಸರ್ಕಾರ ಯಾಕೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧಸರಿಯಾದ ಕ್ರಮ ಕೈಗೊಂಡಿಲ್ಲ. ಹಿಂದಿನ ಬಿಎಸ್‌ಪಿ ಸರ್ಕಾರಕ್ಕೆ ರೈತರ ಜತೆ ಇದ್ದ ಬದ್ಧತೆ ಈ ಸರ್ಕಾರದಲ್ಲಿ ಕಂಡುಬರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಚೌಕಿದಾರ್(ಕಾವಲುಗಾರ)ಕೇವಲ ಉದ್ಯಮಿಗಳಿಗೆ ಕೆಲಸ ಮಾಡುತ್ತಿದ್ದಾರೆ. ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಭಾನುವಾರ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದರು.

ADVERTISEMENT

ಕಬ್ಬು ಬೆಳೆಗಾರರಿಗೆ ಬಾಕಿಯಿರುವ ₹10 ಸಾವಿರ ಕೋಟಿ ಮೊತ್ತಕ್ಕೆ ಸಂಬಂಧಿಸಿದ ಮಾಹಿತಿಯನ್ನುಪ್ರಿಯಾಂಕಾಗಾಂಧಿ ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.