ADVERTISEMENT

ಬಿಜೆಪಿ ಸೇರಿದ ಪಿ.ಸಿ. ಜಾರ್ಜ್‌

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 18:45 IST
Last Updated 10 ಏಪ್ರಿಲ್ 2019, 18:45 IST

ತಿರುವನಂತಪುರ: ಕೇರಳ ಪಕ್ಷೇತರ ಶಾಸಕ ಪಿ.ಸಿ. ಜಾರ್ಜ್‌ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಪಟ್ಟಣಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪೂಂಜಾರ್‌ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಾರ್ಜ್‌ ಗೆದ್ದಿದ್ದರು. ಪಕ್ಕದ ಕಾಂಜಿರಪಳ್ಳಿ ವಿಧಾನಸಭಾ ಕ್ಷೇತ್ರದಲ್ಲೂ ಅವರ ಬೆಂಬಲಿಗರ ಸಂಖ್ಯೆ ದೊಡ್ಡದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT