ADVERTISEMENT

ಇದು ಪ್ರಜಾಪ್ರಭುತ್ವದ ವಿಜಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಮೇ 2018, 13:46 IST
Last Updated 19 ಮೇ 2018, 13:46 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಬಹುಮತ ಇಲ್ಲದೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್‌.ಯಡಿಯೂರಪ್ಪ ಶನಿವಾರ ವಿಶ್ವಾಸಮತ ಯಾಚಿಸದೆ ರಾಜೀನಾಮೆ ನೀಡಿದ್ದಾರೆ. 104 ಸ್ಥಾನ ಗೆದ್ದ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನ ನೀಡಿದ್ದರು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು.

ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಗಡುವು ನೀಡಿದ್ದರೂ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಬಿಜೆಪಿಗೆ ಸೂಚನೆ ನೀಡಿತ್ತು. ಸುಪ್ರೀಂ ಆದೇಶದಂತೆ ಶನಿವಾರ 4 ಗಂಟೆಗೆ ವಿಶ್ವಾಸಮತ ಯಾಚಿಸುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದರೆ ವಿಶ್ವಾಸಮತ ಯಾಚನೆಗೆ ಮುನ್ನ ಭಾಷಣ ಮಾಡಿದ ಯಡಿಯೂರಪ್ಪ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಿರ್ಗಮಿಸಿದ್ದಾರೆ.

ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ
ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ರಾಜ್ಯ ರಾಜಕಾರಣದಲ್ಲಿನ ಈ ಬೆಳವಣಿಗೆಯನ್ನು ಪ್ರಜಾಪ್ರಭುತ್ವದ ವಿಜಯ ಎಂದು ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.