ADVERTISEMENT

ಎಸ್‌ಡಿಪಿಐ ಜತೆಗೆ ಅಪವಿತ್ರ ಮೈತ್ರಿ: ಕೇಂದ್ರ ರೈಲ್ವೆ ಸಚಿವ ಪೀಯೂಷ್‌ ಗೋಯಲ್‌

​ಪ್ರಜಾವಾಣಿ ವಾರ್ತೆ
Published 10 ಮೇ 2018, 19:30 IST
Last Updated 10 ಮೇ 2018, 19:30 IST

ಬೆಂಗಳೂರು: ‘ಉಗ್ರರ ಜತೆಗೆ ನಂಟು ಹೊಂದಿರುವ ಎಸ್‌ಡಿಪಿಐ ಜತೆಗೆ ಕಾಂಗ್ರೆಸ್‌ ಅಪವಿತ್ರ ಮೈತ್ರಿ ಮಾಡಿಕೊಂಡಿದೆ’ ಎಂದು ಕೇಂದ್ರ ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಆರೋಪಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶೆಗೊಂಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಚಾರದ ಕೊನೆಯಗಳಿಗೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್‌ ನಾಯಕರ ನಡುವೆ ಭಿನ್ನಾಭಿಪ್ರಾಯ ಇಲ್ಲ ಎಂದು ತೋರಿಸುವ ಯತ್ನ ಮಾಡಿದ್ದಾರೆ’ ಎಂದರು.

‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಲಸೌಕರ್ಯ ಕೊರತೆಯಿಂದಾಗಿ ಬೆಂಗಳೂರು ಹಿಂದೆ ಬಿದ್ದಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಜಾಸ್ತಿಯಾಗಿದೆ. ಈ ಬಗ್ಗೆ ರಾಹುಲ್‌ ಚಕಾರ ಎತ್ತಿಲ್ಲ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.