ADVERTISEMENT

ಕಾಂಗ್ರೆಸ್‌ನಿಂದ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ, ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 8:10 IST
Last Updated 23 ಏಪ್ರಿಲ್ 2018, 8:10 IST
ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ ನಾಮಪತ್ರ ಸಲ್ಲಿಸಿದರು
ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ ನಾಮಪತ್ರ ಸಲ್ಲಿಸಿದರು   

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ‌ ಬಿ.ಎ.ಮೊಹಿಯುದ್ದೀನ್ ಬಾವ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಸೈಕಲ್‌ ಏರಿ ಬರುವ ಮೂಲಕ ಶಾಸಕ ಬಾವ ಗಮನ ಸೆಳೆದರು.

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಜೆ.ಆರ್.ಲೋಬೊ ನಾಮಪತ್ರ ಸಲ್ಲಿಸಿದರು. ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂತೋಷ್ ಕುಮಾರ್ ರೈ ಬೋಳಿಯಾರ್ ನಾಮಪತ್ರ ಸಲ್ಲಿಸಿದರು.

ADVERTISEMENT

ಮಂಗಳೂರು ದಕ್ಷಿಣ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ಅವರೂ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.