ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹ 50 ಲಕ್ಷ ಹಣ ವಶ

​ಪ್ರಜಾವಾಣಿ ವಾರ್ತೆ
Published 4 ಮೇ 2018, 11:09 IST
Last Updated 4 ಮೇ 2018, 11:09 IST
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹ 50 ಲಕ್ಷ ಹಣ ವಶ
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹ 50 ಲಕ್ಷ ಹಣ ವಶ   

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 50 ಲಕ್ಷ ಹಣವನ್ನು ಹುಣಸೂರಿನ ಚುನಾವಣಾಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಳಿಕೆರೆ ಸಮೀಪದ ಮನುಗನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಬಸ್ಸು ಮೈಸೂರಿನಿಂದ ಉಡುಪಿಗೆ ತೆರಳುತ್ತಿತ್ತು.

₹2000 ಮತ್ತು ₹ 500 ಮುಖಬೆಲೆಯ ನೋಟುಗಳ ಕಂತೆಗಳನ್ನು ರಟ್ಟಿನ ಪೆಟ್ಟಿಗೆಯಲ್ಲಿ ತುಂಬಿಡಲಾಗಿತ್ತು ಎಂದು ಹುಣಸೂರು ಚುನಾವಣಾಧಿಕಾರಿ ನಿತೀಶ್‌ ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.