ADVERTISEMENT

ಗಿನ್ನಿಸ್‌ ದಾಖಲೆಗಾಗಿ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 19:30 IST
Last Updated 17 ಏಪ್ರಿಲ್ 2018, 19:30 IST

ಮೈಸೂರು: ಪ್ರತಿಷ್ಠಿತ ಕಣವಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ತಮಿಳುನಾಡಿನ ಸೇಲಂ ಜಿಲ್ಲೆಯ ಡಾ. ಕೆ.ಪದ್ಮನಾಭ ರಾಜನ್ ನಾಮಪತ್ರ ಸಲ್ಲಿಸಿದ್ದಾರೆ.

ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಉಮೇದುವಾರಿಕೆ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಲು ಮುಂದಾಗಿದ್ದಾರೆ.

‘ಮೊದಲ ದಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಏಕೈಕ ನಾಮಪತ್ರ ಸಲ್ಲಿಕೆ ಆಗಿದೆ. ಪದ್ಮನಾಭ ರಾಜನ್ ರಾಜ್ಯದ ಮತದಾರರಲ್ಲ’ ಎಂದು ಕ್ಷೇತ್ರದ ಚುನಾವಣಾಧಿಕಾರಿ ವೆಂಕಟೇಶ್‌ ತಿಳಿಸಿದರು.

ADVERTISEMENT

ಕೃಷಿಕರಾಗಿದ್ದು, 1988ರಿಂದ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಲವರ ವಿರುದ್ಧ 191 ಬಾರಿ ಕಣಕ್ಕಿಳಿದಿದ್ದಾರೆ.

‘ಗೆಲುವಿನ ಉದ್ದೇಶದಿಂದ ನಾನು ಸ್ಪರ್ಧಿಸುತ್ತಿಲ್ಲ. ಬದಲಾಗಿ ಗಿನ್ನಿಸ್‌ ದಾಖಲೆ ನಿರ್ಮಿಸುವ ಹಂಬಲವಿದೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ಕರುಣಾನಿಧಿ, ಜಯಲಲಿತಾ, ಎಸ್‌.ಬಂಗಾರಪ್ಪ, ಎಸ್‌.ಎಂ.ಕೃಷ್ಣ ಅವರ ವಿರುದ್ಧವೂ ಸ್ಪರ್ಧಿಸಿದ್ದೆ. ಈಗ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಯುತ್ತಿದ್ದೇನೆ’ ಎಂದು ಅವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.