ADVERTISEMENT

ಚಿಕ್ಕೋಡಿ–ಸದಲಗಾ, ನಿಪ್ಪಾಣಿ ಕ್ಷೇತ್ರಗಳಿಗೆ ಪತಿ-ಪತ್ನಿಗೆ ಬಿಜೆಪಿ ಟಿಕೆಟ್

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 12:25 IST
Last Updated 16 ಏಪ್ರಿಲ್ 2018, 12:25 IST
ಶಶಿಕಲಾ ಜೊಲ್ಲೆ, ಅಣ್ಣಾಸಾಹೇಬ ಜೊಲ್ಲೆ
ಶಶಿಕಲಾ ಜೊಲ್ಲೆ, ಅಣ್ಣಾಸಾಹೇಬ ಜೊಲ್ಲೆ   

ಬೆಳಗಾವಿ: ಉದ್ಯಮಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ನಿಪ್ಪಾಣಿಯ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಇದೇ ಕ್ಷೇತ್ರಕ್ಕೆ ಟಿಕಟ್‌ ಲಭಿಸಿತ್ತು. ಎರಡನೇ ಪಟ್ಟಿಯಲ್ಲಿ ಅವರ ಪತಿ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಚಿಕ್ಕೋಡಿ–ಸದಲಗಾ ಕ್ಷೇತ್ರಕ್ಕೆ ಟಿಕೆಟ್‌ ನೀಡಲಾಗಿದೆ.

ಅಣ್ಣಾಸಾಹೇಬ ಜೊಲ್ಲೆ ಅವರು 2004ರಲ್ಲಿ ಬಿಜೆಪಿಯಿಂದ ಸದಲಗಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಎದುರು ಸೋತಿದ್ದರು. ಕ್ಷೇತ್ರ ಪುನರ್‌ವಿಂಗಡಣೆಯ ನಂತರ 2008ರಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಪತ್ನಿ ಶಶಿಕಲಾ ಜೊಲ್ಲೆ ಅವರನ್ನು ಕಣಕ್ಕಿಳಿಸಿದ್ದರು. ಕಾಂಗ್ರೆಸ್‌ನ ಕಾಕಾಸಾಹೇಬ ಪಾಟೀಲ ಅವರ ಎದುರು ಪರಾಭವಗೊಂಡಿದ್ದರು. 2013ರಲ್ಲಿ ಪುನಃ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.