ಕಾರವಾರ: ಹಳಿಯಾಳ ತಾಲ್ಲೂಕಿನ ಬೆಳವಟಿಗಿ ಗ್ರಾಮದ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 450 ಲೀ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೋಮವಾರ ತಡರಾತ್ರಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸಾಂಬಾಜಿ ಅಪ್ಪಯ್ಯ ಮಂಗನಗೌಡ (62) ಹಾಗೂ ಅವರ ಪುತ್ರ ಮೌಳೇಶ್ವರ (33) ಬಂಧಿತರು.
ಈ ಬಗ್ಗೆ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ಎಲ್.ಎ.ಮಂಜುನಾಥ, 'ಆರೋಪಿಗಳು ತಮ್ಮ ತೋಟದ ಮನೆಯ ಅಟ್ಟದಲ್ಲಿ ಗೋಲ್ಡನ್ ಏಸ್ ಫೈಲ್ ವಿಸ್ಕಿಯ 50 ಕೇಸ್ ಗಳನ್ನು ಚುನಾವಣಾ ಸಂದರ್ಭದಲ್ಲಿ ಹಂಚುವ ಸಲುವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಪ್ರಕಾರ ದಾಂಡೇಲಿ ಅಬಕಾರಿ ನಿರೀಕ್ಷಕಿ ಕವಿತಾ ಮತ್ತು ಅವರ ತಂಡ ದಾಳಿ ಮಾಡಿತು. ತಡರಾತ್ರಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ಮುಂಜಾನೆ ಬಂಧಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.