ಬೆಂಗಳೂರು: ‘ನನ್ನ ಆಸ್ತಿ ಎಷ್ಟಿದೆ ಎಂಬುದು ಎಲ್ಲರಿಗೂ ಗೊತ್ತು. ನಾನು ಯಾವುದೇ ಆಸ್ತಿ ಕಬಳಿಸಿಲ್ಲ. ಯಾರಿಗೂ ನಿವೇಶನ ಮಂಜೂರು ಮಾಡಿಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
‘ದೇವೇಗೌಡರು 46 ನಿವೇಶನಗಳನ್ನು ಮಂಜೂರು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅಪ್ಪ ಮಕ್ಕಳನ್ನು ದಗಲ್‌ಬಾಜಿ ಎಂದು ಕರೆದಿದ್ದಾರೆ. ನಮ್ಮನ್ನು ನಾಶ ಮಾಡುವುದೇ ಅವರ ಗುರಿ. ಅವರಿಗೆ ರಾಜರಾಜೇಶ್ವರಿ ನಗರ ಕ್ಷೇತ್ರದ ಜನರು ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.
‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ವಿಧಾನಸೌಧಕ್ಕೆ ಸೀಮಿತ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.