ADVERTISEMENT

ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್ ಮನೆ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 6:15 IST
Last Updated 28 ಏಪ್ರಿಲ್ 2018, 6:15 IST
ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್
ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್   

ಬೆಳಗಾವಿ: ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಂದಿಗವಾಡ ಗ್ರಾಮದಲ್ಲಿರುವ ನಿವಾಸದ ಮೇಲೆ 11 ಅಧಿಕಾರಿಗಳ ತಂಡ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಾಮಪತ್ರದೊಂದಿಗೆ ಅವರು ಸಲ್ಲಿಸಿದ್ದ ಆಸ್ತಿ ವಿವರದಲ್ಲಿ,‌ ತಮ್ಮ ಬಳಿ ₹ 191 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಐಟಿ ಶಾಕ್ ನೀಡಿದೆ.

ADVERTISEMENT

ಹೋದ ಚುನಾವಣೆಯಲ್ಲೂ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು.

ಬಾಗವಾನ ಅವರ ಹುಬ್ಬಳ್ಳಿ ವಿದ್ಯಾನಗರ ನಿವಾಸ ಮತ್ತು ಅರವಿಂದ ನಗರ ಕಚೇರಿ ಮೇಲೂ ಗೋವಾ ರಾಜ್ಯದ ಐಟಿ ಅಧಿಕಾರಿಗಳ 15 ಜನ ತಂಡದ ದಾಳಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂರು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಮನೆಯಲ್ಲಿ ನಾಸೀರ್ ಬಾಗವಾನ್‌, ಪುತ್ರ ರಮೀಸ್ ಮತ್ತು ರಯೀಸ್ ಬಾಗವಾನ ಅವರ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಮನೆ ಬಳಿ ಹೋಗಲು ಅವಕಾಶ ಕೊಟ್ಟಿಲ್ಲ.

ಗಿಳಿ ಹಸಿರು ಬಣ್ಣದ ಮನೆ ನಾಸಿರ್‌ ಬಗವಾನ್‌ ಅವರದು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.