ADVERTISEMENT

ತಾ.ಪಂ. ಸಭೆಯಲ್ಲಿ ಜಿ.ಪಂ. ಸದಸ್ಯೆ ಪತಿ ದರ್ಬಾರ್!

​ಪ್ರಜಾವಾಣಿ ವಾರ್ತೆ
Published 26 ಮೇ 2018, 19:30 IST
Last Updated 26 ಮೇ 2018, 19:30 IST
ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾರುತಿ ಗೊರವರ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು
ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾರುತಿ ಗೊರವರ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು   

ಹಾವೇರಿ: ಇಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮವ್ವ ಗೊರವರ ಅವರ ಪತಿ, ಮಾರುತಿ ಗೊರವರ ಪಾಲ್ಗೊಂಡು ಅಧಿಕಾರಿಗಳನ್ನು ಪ್ರಶ್ನಿಸಿದರು.

ವೇದಿಕೆಯಲ್ಲಿ ಆಸೀನರಾಗಿದ್ದ ಮಾರುತಿ ಗೊರವರ ಅವರು ತಮ್ಮ ಪತ್ನಿಯ ಕ್ಷೇತ್ರ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯ ಬಳಿಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ‘ಪತ್ನಿಯ ಅಧಿಕಾರ ಪತಿ ಚಲಾಯಿಸುವುದು ತಪ್ಪು. ಆದರೆ, ಅವರೇ ಬಂದು ವೇದಿಕೆಯಲ್ಲಿ ಕುಳಿತುಕೊಂಡಿದ್ದಾರೆ. ಸಭೆಯಲ್ಲಿ ಇಬ್ಬರು ಶಾಸಕರಿದ್ದರು. ಹೀಗಾಗಿ, ನಾನು ಸೂಚನೆ ನೀಡುವುದು ಸರಿಯಲ್ಲ ಎಂದು ಸುಮ್ಮನಾದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.