ADVERTISEMENT

ತೈಲಬೆಲೆ ಏರಿಕೆಗೆ ಖಂಡನೆ, ವಿನೂತನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಮೇ 2018, 8:52 IST
Last Updated 7 ಮೇ 2018, 8:52 IST
ಕೋಲಾರ ಜಿಲ್ಲೆ ಮಾಲೂರಿನಲ್ಲಿ ಸೋಮವಾರ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತರು ರೋಡ್‌ ಷೋ ವೇಳೆ ಸಿಲಿಂಡರ್‌ ಮಾದರಿಗಳನ್ನು ಪ್ರದರ್ಶಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆ ಮಾಲೂರಿನಲ್ಲಿ ಸೋಮವಾರ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತರು ರೋಡ್‌ ಷೋ ವೇಳೆ ಸಿಲಿಂಡರ್‌ ಮಾದರಿಗಳನ್ನು ಪ್ರದರ್ಶಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.   

ಕೋಲಾರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರು ಜಿಲ್ಲೆಯ ಮಾಲೂರಿನಲ್ಲಿ ಸೋಮವಾರ ರೋಡ್‌ ಷೋ ನಡೆಸಿ ಪಕ್ಷದ ಅಭ್ಯರ್ಥಿ ಕೆ.ವೈ. ನಂಜೇಗೌಡ ಪರ ಚುನಾವಣಾ ಪ್ರಚಾರ ನಡೆಸಿದರು.

ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ರಾಹುಲ್‌ ಗಾಂಧಿ ಹಾಗೂ ಪಕ್ಷದ ಕಾರ್ಯಕರ್ತರು ಸೈಕಲ್‌ ಮತ್ತು ಎತ್ತಿನ ಬಂಡಿಯಲ್ಲಿ ಸಾಗಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಡುಗೆ ಅನಿಲದ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾರ್ಯಕರ್ತರು ಸಿಲಿಂಡರ್‌ ಮಾದರಿಗಳನ್ನು ಪ್ರದರ್ಶಿಸಿ, ‘ಮೋದಿ ಸರ್ಕಾರ ತೊಲಗಲಿ’ ಎಂದು ಘೋಷಣೆ ಕೂಗಿದರು. ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆಯ ಬಸ್‌ನಿಂದ ಕೆಳಗಿಳಿದು ಮಹಿಳಾ ಕಾರ್ಯಕರ್ತರ ಜತೆ ಹೆಜ್ಜೆ ಹಾಕಿದರು.

ADVERTISEMENT

ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸೋಮವಾರ ರೋಡ್‌ ಷೋ ವೇಳೆ ಸೈಕಲ್‌, ಎತ್ತಿನಬಂಡಿಯಲ್ಲಿ ಸಾಗಿದರು.

ರಾಹುಲ್‌ ಗಾಂಧಿ ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತರು ರೋಡ್‌ ಷೋ ವೇಳೆ ಸಿಲಿಂಡರ್‌ ಮಾದರಿಗಳನ್ನು ಪ್ರದರ್ಶಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.