ADVERTISEMENT

ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತೀರ್ಪುಗಾರರಾಗಿರುವ ‘ಜೀ’ ಕನ್ನಡ ವಾಹಿನಿಯ 'ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮಕ್ಕೆ ಜೆಡಿಎಸ್ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 13:59 IST
Last Updated 29 ಏಪ್ರಿಲ್ 2018, 13:59 IST
ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತೀರ್ಪುಗಾರರಾಗಿರುವ ‘ಜೀ’ ಕನ್ನಡ ವಾಹಿನಿಯ 'ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮಕ್ಕೆ ಜೆಡಿಎಸ್ ಆಕ್ಷೇಪ
ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತೀರ್ಪುಗಾರರಾಗಿರುವ ‘ಜೀ’ ಕನ್ನಡ ವಾಹಿನಿಯ 'ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮಕ್ಕೆ ಜೆಡಿಎಸ್ ಆಕ್ಷೇಪ   

ಬೆಂಗಳೂರು: ‘ಜೀ’ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ರಿಂದ 10ರ ವರಗೆ ಪ್ರಸಾರವಾಗುವ 'ಕಾಮಿಡಿ ಕಿಲಾಡಿಗಳು' ಸೀಸನ್-2 ಕಾರ್ಯಕ್ರಮಕ್ಕೆ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತಂತೆ ಜಡಿಎಸ್‌ನ ರಾಜ್ಯ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಪ್ರದೀಪ್ ಕುಮಾರ್ ಮುಖ್ಯ ಚುನಾವಣಾ ಅಧಿಕಾರಿಗೆ ಭಾನುವಾರ ಲಿಖಿತ ದೂರು ಸಲ್ಲಿಸಿದ್ದಾರೆ.

'ಈ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ನಿರ್ಣಾಯಕರಾಗಿದ್ದಾರೆ. ಪ್ರಸ್ತುತ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿದ್ದಾರೆ. ಆದ್ದರಿಂದ, ವಾಹಿನಿ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ಕೋರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.