ಶಿಕಾರಿಪುರ: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಶಿಕಾರಿಪುರ ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮಧ್ಯಾಹ್ನ 1.25ಕ್ಕೆ ಚುನಾವಣಾಧಿಕಾರಿ ಅವರಿಗೆ ಯಡಿಯೂರಪ್ಪ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಛತ್ತಿಸಗಡ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವ ಅನಂತ್ ಕುಮಾರ್, ಶಾಸಕ ಬಿ.ವೈ. ರಾಘವೇಂದ್ರ ಹಾಜರಿದ್ದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಯಡಿಯೂರಪ್ಪ ಹುಚ್ಚುರಾಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಪೂಜೆಯ ಬಳಿಕ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಯಡಿಯೂರಪ್ಪ ಅವರ ಸಾವಿರಾರು ಅಭಿಮಾನಿಗಳು ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.