ADVERTISEMENT

ಭಿನ್ನಮತೀಯನಲ್ಲ: ಪಿ.ಟಿ.ಪರಮೇಶ್ವರನಾಯ್ಕ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 19:30 IST
Last Updated 9 ಜೂನ್ 2018, 19:30 IST
ಪಿ.ಟಿ.ಪರಮೇಶ್ವರನಾಯ್ಕ
ಪಿ.ಟಿ.ಪರಮೇಶ್ವರನಾಯ್ಕ   

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ‘ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಭಿನ್ನಮತೀಯರ ಬಣಕ್ಕೂ ನನಗೂ ಸಂಬಂಧ ಇಲ್ಲ. ಸಚಿವ ಸ್ಥಾನ ಸಿಗದೇ ಇರುವುದರಿಂದ ನನಗೆ ಬೇಸರವಿಲ್ಲ’ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ಗುಂಪುಗಾರಿಕೆ, ಭಿನ್ನಮತೀಯ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಆದರೂ, ಮಾಧ್ಯಮಗಳಲ್ಲಿ ಎಂ.ಬಿ.ಪಾಟೀಲ ನೇತೃತ್ವದ ಭಿನ್ನಮತೀಯ ಶಾಸಕರ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟಗೊಂಡಿರುವುದು ಬೇಸರ ತರಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT